-
Baayi Naridamele
Composer : Shri Kanakadasaru ಬಾಯಿ ನಾರಿದ ಮೇಲೆ ಏಕಾಂತವೆತಾಯಿ ತೀರಿದ ಮೇಲೆ ತವರಾಸೆಯೆ, ಮನವೆ ||ಪ|| ಕಣ್ಣು ಕೆಟ್ಟ ಮೇಲೆ ಕಡುರೂಪ ಚೆಲ್ವಿಕೆಯೆ,ಬಣ್ಣಗುಂದಿದ ಮೇಲೆ ಬಹುಮಾನವೆ,ಪುಣ್ಯತೀರಿದ ಮೇಲೆ ಪರಲೋಕ ಸಾಧನವೆ,ಸುಣ್ಣವಿಲ್ಲದ ವೀಳ್ಯವದು ಸ್ವಾದುಮಯವೆ ||೧|| ಕಿಲುಬಿನಾ ಬಟ್ಟಲೊಳು ಹುಳಿ ಕಲಸಿ ಉಣ ಬಹುದೆ,ಚಳಿಯುರಿಗೆ ಚಂದನದ ಲೇಪ ಹಿತವೆ,ಮೊಲೆಬಿದ್ದ ಹೆಣ್ಣಿನೊಳು ಮೋಹಕ್ಕೆ ಸೊಗಸಹುದೆ,ಬೆಲೆಬಿದ್ದ ಸರಕಿನೊಳು ಲಾಭವುಂಟೆ ||೨|| ಪಥ್ಯ ಸೇರದ ಮೇಲೆ ನಿತ್ಯ ಸುಖವೆನಬಹುದೆ,ಸತ್ತ್ವ ತಗ್ಗಿದ ಮೇಲೆ ಸಾಮರ್ಥ್ಯವೆ,ಪೃಥ್ವಿಯೊಳು ಕಾಗಿನೆಲೆಯಾದಿಕೇಶವ ನಿನ್ನ,ಭಕ್ತಿಯಿಲ್ಲದ ನರಗೆ ಮುಕ್ತಿಯು ಉಂಟೆ? ||೩||…
