-
Dambhakada bhakutiyanu
Composer : Shri Mohana dasaru ಡಂಭಕದ ಭಕುತಿಯನು ಬಿಡು ಕಂಡ್ಯ ಮನವೆ [ಪ]ಅಂಬುಜಾಕ್ಷನು ಒಲಿಯ ಅನಂತ ಕಾಲಕ್ಕು [ಅ.ಪ] ಬಹಿರ ಅಂಗಡಿ ಹೂಡಿ ಜನರ ವಂಚಿಸಿದರೆಅಹಿಕ ಫಲವಲ್ಲದೆ ಮೋಕ್ಷವುಂಟೆ ?ವಿಹಿತಾ ವಿಹಿತವ ತಿಳಿದು ಸತ್ಕರ್ಮ ಕಿಂಚಿತು ಮಾಡೆದಹಿಸುವುದು ಅಘರಾಶಿ ಅಹಿಶಾಯಿ ಒಲಿವ [೧] ವರ ವೈಷ್ಣವರು ಬಂದು ನಿಲಲು ವಂದಿಸದಲೆಹರಿ ಪೂಜೆ ಮಾಳ್ಪೆನೆಂದು ಕುಳಿತುಕೊಂಬೆಅರಿಯದ ಊರೊಳಗೆ ಅಗಸರ ಮಾಳಿಯೇಹಿರಿಯ ಮುತ್ತೈದೆಯು ಎಂದು ಕರೆಸುವಂತೆ [೨] ಜಪವ ಮಾಡುವೆನೆಂದು ಮುಸುಕನಿಟ್ಟು ಕುಳಿತುತಪಿಸುವೆ ಒಳಗೆ ನೀ ಧನದಾಸೆಯಿಂದಕುಪಿತ ಬುದ್ಧಿಯ…
