-
Gopaladasara Charitre pada
Composer : Shri Tandegopalavittala ಶ್ರೀಗೋಪಾಲದಾಸರ ಅನುಜರೂ, ಶಿಷ್ಯರೂ,ಶ್ರೀತಂದೆಗೋಪಾಲವಿಠಲದಾಸಾರ್ಯ(ರಂಗಪ್ಪ ದಾಸರು) ವಿರಚಿತಶ್ರೀಗೋಪಾಲದಾಸರ ಚರಿತ್ರೆ ಪದ ರಾಗ: ಆನಂದಭೈರವಿ, ಆದಿತಾಳ ಭಜಿಸಿ ಬದುಕಿರೊ ಅಜನಪಿತ ಶ್ರೀವಿಜಯವಿಟ್ಠಲರಾಯನಾ |ಭಜನಿ ಮಾಡುವ ವಿಜಯರಾಯರೆ ನಿಜಗುರುಗಳೆಂದೆನಿಪನಾ||ಪ|| ಮೂಲ ಪೇಳ್ವೆ ವಿಶಾಲ ಮಹಿಮ ಸುಶೀಲ ವಿಜಯರಾಯರ |ಕಾಲಕಾಲಕೆ ಸ್ಮರಿಪ ಶ್ರೀಗೋಪಾಲದಾಸರಾಯರಾ || ೧ || ದಧಿಪಾಷಾಣದಧಿಪನೆನಿಸುವ ಮುದಗಲಾಖ್ಯ ಪುತ್ರನಾ |ಉದರದಲಿ ಉದುಭವಿಸಿದರು ನಾಲ್ವರದರೊಳಗೆ ಬುಧವರ್ಯನಾ|| ೨ || ಪುಟ್ಟಿದಾಗಲೆ ಪಿತ ಮುರಾರಿಯ ಶಿಷ್ಟ ಶಿಶುವೆಂದೆನುತಲಿ |ಇಟ್ಟ ಈ ವಸುಧಿಯೊಳು ಪೆಸರನು ಧಿಟ್ಟ ಭಾಗಣ್ಣನೆನುತಲಿ ||…
