-
Snana madirayya
Composer: Shri Purandara dasaru ಸ್ನಾನ ಮಾಡಿರಯ್ಯ ಜ್ಞಾನ ತೀರ್ಥದಲಿನಾನು ನೀನೆಂಬಹಂಕಾರವ ಬಿಟ್ಟು ||ಪ.|| ತನ್ನೊಳು ತಾನೆ ತಿಳಿದರೊಂದು ಸ್ನಾನಅನ್ಯಾಯಗಾರಿ ಕಳೆದರೊಂದು ಸ್ನಾನಅನ್ಯಾಯವಾಡದಿದ್ದರೊಂದು ಸ್ನಾನಚೆನ್ನಾಗಿ ಹರಿಯ ನೆನೆದರೊಂದು ಸ್ನಾನ (೧) ಪರಸತಿಯ ಬಯಸದಿದ್ದರೆ ಒಂದು ಸ್ನಾನಪರನಿಂದೆ ಮಾಡದಿದ್ದರೆ ಒಂದು ಸ್ನಾನಪರದ್ರವ್ಯ ಅಪಹರಿಸದಿರೆ ಒಂದು ಸ್ನಾನಪರತತ್ವ ತಿಳಿದುಕೊಂಡರೆ ಒಂದು ಸ್ನಾನ (೨) ತಂದೆತಾಯಿಗಳ ಸೇವೆ ಒಂದು ಸ್ನಾನಮುಂದಿನ ಮಾರ್ಗ ತಿಳಿದರೊಂದು ಸ್ನಾನಬಂಧನವನು ಬಿಡಿಸಿದರೊಂದು ಸ್ನಾನಸಂಧಿಸಿ ತಿಳಿದುಕೊಂಡರೆ ಸೇತು ಸ್ನಾನ (೩) ಅತ್ತೆ ಮಾವನ ಸೇವೆಯೊಂದು ಸ್ನಾನಭರ್ತನ ಮಾತು ಕೇಳುವುದೊಂದು…
